📅 ಶುಕ್ರವಾರ, ಅಕ್ಟೋಬರ್ 30, 2026
Myna News Logo
ಮೈನಾ

ಸೇಡಂ

ನ್ಯೂಸ್

ಕನ್ನಡ ದಿನ ಪತ್ರಿಕೆ
Editor

ಪ್ರಧಾನ ಸಂಪಾದಕರು:

ಮಹಿಪಾಲರೆಡ್ಡಿ

Kalaburagi

ಬರ ಪೀಡಿತ ಪ್ರದೇಶ ಘೋಷಣೆಗೆ ಕರವೇ ಪಾದಯಾತ್ರೆ

ಮಹಿಪಾಲರೆಡ್ಡಿ

ಮಹಿಪಾಲರೆಡ್ಡಿ

ಪ್ರಧಾನ ಸಂಪಾದಕರು

ಭಾನುವಾರ, ಸೆಪ್ಟೆಂಬರ್ 20, 20262 ನಿಮಿಷ ಓದು6 ವೀಕ್ಷಣೆಗಳು
ಸುದ್ದಿ ಹಂಚಿಕೊಳ್ಳಿ:
ಬರ ಪೀಡಿತ ಪ್ರದೇಶ ಘೋಷಣೆಗೆ ಕರವೇ ಪಾದಯಾತ್ರೆ
ಪೂರ್ಣಚಿತ್ರ ವೀಕ್ಷಿಸಲು ಕ್ಲಿಕ್ ಮಾಡಿ
ಕಲಬುರಗಿ: ಕಲ್ಯಾಣ ಕರ್ನಾ ಟಕದ ಏಳು ಜಿಲ್ಲೆ ಗಳನ್ನು ಬರಗಾಲ ಪೀಡಿತ ಪ್ರದೇಶಗಳೆಂದು ಘೋಷಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಉತ್ತರ ಕರ್ನಾಟಕ ವತಿಯಿಂದ ಶನಿವಾರ ‘ನಮ್ಮ ನಡೆ ಕಲ್ಯಾಣ ಕಲಬುರಗಿ ಕಡೆ’ ಅಭಿಯಾನ ದಡಿ ಬೃಹತ್ ಪಾದಯಾತ್ರೆ ನಡೆಸಲಾಯಿತು. ನಗರದ ಕೇಂದ್ರ ಬಸ್ ನಿಲ್ದಾಣದಿಂದ ಆರಂಭಗೊAಡ ಪಾದಯಾತ್ರೆ ಜಿಲ್ಲಾಧಿಕಾರಿ ಕಚೇರಿವರೆಗೆ ಸಾಗಿತು. ಜಿಲ್ಲಾಡಳಿತದ ಮೂಲಕ ಸಿಎಂ ಅವರಿಗೆ ವಿವಿಧ ಬೇಡಿಕೆಗಳ ಮನವಿ ಪತ್ರ ಸಲ್ಲಿಸಲಾಯಿತು. ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ರೈತರು ಹಾಗೂ ಜನರು ಎದುರಿಸುತ್ತಿರುವ ಸಮಸ್ಯೆ ಗಳಿಗೆ ಸರ್ಕಾರ ತುರ್ತು ಸ್ಪಂದಿಸ ಬೇಕು. ಅಗತ್ಯ ಪರಿಹಾರ ಕ್ರಮ ಕೈಗೊಳ್ಳಬೇಕೆಂಬ ಬೇಡಿಕೆಗ¼ಳಿಗೆ ಒತ್ತಾಯಿಸಲಾಯಿತು. ವೇದಿಕೆ ರಾಜ್ಯ ಅಧ್ಯಕ್ಷ ಪ್ರವೀಣಕುಮಾರ ಶೆಟ್ಟಿ, ಉತ್ತರ ಕರ್ನಾಟಕ ಅಧ್ಯಕ್ಷ ಶರಣು ಬಿ. ಗದ್ದುಗೆ, ಕಲ್ಯಾಣ ಕರ್ನಾಟಕ ಅಧ್ಯಕ್ಷ ಅಭಿಷೇಕ ಬಾಲಾಜಿ ಜಿಲ್ಲ ಅದ್ಯಕ್ಷ ಗೋಪಾಲ್ ನಾಟೀಕಾರ, ಶಿವರಾಜ್ ಗೌಡ,ಉಮೇಶ್ ಗೌಡ,ರಾಜಗಟ್ಟ ರವಿ,ಜಗದೀಶ್ ಗೌಡ,ಲೊಕೇಶ,ಮುಖಂಡರಾದ ಮನೋಹರ ಬಿದನೂರು. ಮಂಜುನಾಥ ಕುಸೂನೂರು, ವಿಜಯ ಅಂಕಲಗಿ ಇತರರಿದ್ದರು.
ಟ್ಯಾಗ್ಸ್:#Sedam#Karnataka
ಮಹಿಪಾಲರೆಡ್ಡಿ

ಮಹಿಪಾಲರೆಡ್ಡಿ

ಪ್ರಧಾನ ಸಂಪಾದಕರು

ಮೈನಾ ಸೇಡಂ ನ್ಯೂಸ್ (RNI/PRGI: KNKAN/25/A1528) ಸೇಡಂ ಮತ್ತು ಕಲ್ಯಾಣ ಕರ್ನಾಟಕದಾದ್ಯಂತ ಸತ್ಯನಿಷ್ಠ ಹಾಗೂ ಗ್ರಾಮೀಣ ಜನಪರ ಪತ್ರಿಕೋದ್ಯಮಕ್ಕೆ ಬದ್ಧವಾಗಿದೆ.