📅 ಶುಕ್ರವಾರ, ಅಕ್ಟೋಬರ್ 30, 2026
Myna News Logo
ಮೈನಾ

ಸೇಡಂ

ನ್ಯೂಸ್

ಕನ್ನಡ ದಿನ ಪತ್ರಿಕೆ
Editor

ಪ್ರಧಾನ ಸಂಪಾದಕರು:

ಮಹಿಪಾಲರೆಡ್ಡಿ

Kalaburagi

ಬಸವಾದಿ ಶರಣರ ಹಿಂದೂ ಸಮಾವೇಶ: ವಿರೋಧ ಸಲ್ಲ

ಮಹಿಪಾಲರೆಡ್ಡಿ

ಮಹಿಪಾಲರೆಡ್ಡಿ

ಪ್ರಧಾನ ಸಂಪಾದಕರು

ಭಾನುವಾರ, ಸೆಪ್ಟೆಂಬರ್ 20, 20262 ನಿಮಿಷ ಓದು12 ವೀಕ್ಷಣೆಗಳು
ಸುದ್ದಿ ಹಂಚಿಕೊಳ್ಳಿ:
ಬಸವಾದಿ ಶರಣರ ಹಿಂದೂ ಸಮಾವೇಶ: ವಿರೋಧ ಸಲ್ಲ
ಪೂರ್ಣಚಿತ್ರ ವೀಕ್ಷಿಸಲು ಕ್ಲಿಕ್ ಮಾಡಿ
ಕಲಬುರ್ಗಿ, ಸೆ.೧೯- ಎಲ್ಲ ಪ್ರಪರ್ಗಗಳನ್ನು ಒಗ್ಗೂಡಿಸುವ ಉದ್ದೇಶದಿಂದ ನಗರದಲ್ಲಿ ಸೆಪ್ಟೆಂಬರ್ ೨೭ರಂದು ಸಂಜೆ ೪ ಗಂಟೆಗೆ ಬಸವಾದಿ ಶಿವಶರಣರ ಹಿಂದೂ ಸಮಾವೇಶ ಆಯೋಜಿಸಲಾಗಿದೆ. ಈ ಸಮಾವೇಶಕ್ಕೆ ವಿರೋಧಿಸುವುದು ಸರಿಯಲ್ಲ ಎಂದು ಶ್ರೀ ಬಸವೇಶ್ವರ ಸೇವಾ ಸಮಾಜದ ಅಧ್ಯಕ್ಷ ಸಿದ್ದಣ್ಣ ಅ. ಗುಡ್ಡಾ ಅವರು ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನೇರಿ ಮಠದ ಅಧ್ಯಕ್ಷ Áಡಸಿದ್ದೇಶ್ವರ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ಹಾಗೂ ನಾಡಿನ ಹರಗುರು, ಚರಮೂರ್ತಿಗಳ ನೇತೃತ್ವದಲ್ಲಿ ಹಾಗೂ ಬಿಜೆಪಿ ನಗರ ಜಿಲ್ಲಾಧ್ಯಕ್ಷ ಚಂದು ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ಜರುಗಲಿರುವ ಸಮಾವೇಶದಲ್ಲಿ ಅಖಂಡ ಹಿಂದೂ ಸಮಾಜದ ಹಾಗೂ ಬಸವಾದಿ ಶಿವಶರಣರ ತತ್ವಗಳನ್ನು ಸಾರುವ ಉದ್ದೇಶ ಹೊಂದಲಾಗಿದೆ ಎಂದರು. ಸಮಾನತೆ, ಕಾಯಕ ಮತ್ತು ದಾಸೋಹದಂತಹ ಬಸವಾದಿ ಶರಣರ ದೇಶರ ಭವ್ಯ ಸಂಸ್ಕೃತಿ, ಸಾವಯವ ಕೃಷಿ ಗೋಸಂರಕ್ಷಣೆ, ಹೈನುಗಾರಿಕೆ ಸೇರಿದಂತೆ ಕೃಷಿ ಸಂಬAಧಿತ ವಿವಿಧ ಸಾವಯವ ಕೃಷಿಗೆ ಒತ್ತು ನೀಡುವ ರೀತಿಯಲ್ಲಿ ಸಮಾವೇಶವನ್ನು ಅರ್ಥ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು. ಸಮಾವೇಶದ ಅಂಗವಾಗಿ ಸುಮಾರು ೨,೦೦೦ ಮಹಿಳೆಯರಿಂದ ಕುಂಭ ಮೆರವಣಿಗೆ ಹಾಗೂ ಧೋಲು, ನಗಾರಿ ಮತ್ತು ಶಿವಶರಣರ ಭಾವಚಿತ್ರಗಳೊಂದಿಗೆ ಭವ್ಯ ಮೆರವಣಿಗೆಯನ್ನು ಖದಿಂದ ಕನಸು ಮಹಜಗತ್ ವೃತ್ತದಿಂದ ನೂತನ ವಿದ್ಯಾಲಯ ಮೈದಾನದವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು. ನೂತನ ವಿದ್ಯಾಲಯದ ಆವರಣದಲ್ಲಿ ಬೃಹತ್ ವೇದಿಕೆ ಕಾರ್ಯಕ್ರಮ ವೇದಿಕೆ ಮೇಲೆ ಸುಮಾರು ೩೦೦ಕ್ಕಿಂತ ಅಧಿಕ ಸ್ವಾಮಿಜಿಗಳ ದಿವ್ಯ ಸಾನ್ನಿಧ್ಯದಲ್ಲಿ ಜಿಲ್ಲಾದ್ಯಂತ ಸುಮಾರು ಸಾವಿರಾರು ಜನ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು. ಈ ಸುದ್ದಿಗೋಷ್ಠಿಯಲ್ಲಿ ಶರಣಪ್ಪ ಬ. ಅವಂಟಗಿ, ಮಹಾದೇವ್ ಅ. ಗೋಡಿ, ಶಿವಶರಣಪ್ಪ ಮ. ಬ್ಯಾಮಾ, ಗುರುಲಿಂಗಪ್ಪ ಪಾಟೀಲ್, ಚನ್ನಬಸಪ್ಪ ಎಸ್. ಕಾಳಗಿ, ಮಲ್ಲೇಶಪ್ಪ ಸೈಮಾ ಮುಂತಾದವರು ಉಪಸ್ಥಿತರಿದ್ದರು.
ಟ್ಯಾಗ್ಸ್:#Sedam#Karnataka
ಮಹಿಪಾಲರೆಡ್ಡಿ

ಮಹಿಪಾಲರೆಡ್ಡಿ

ಪ್ರಧಾನ ಸಂಪಾದಕರು

ಮೈನಾ ಸೇಡಂ ನ್ಯೂಸ್ (RNI/PRGI: KNKAN/25/A1528) ಸೇಡಂ ಮತ್ತು ಕಲ್ಯಾಣ ಕರ್ನಾಟಕದಾದ್ಯಂತ ಸತ್ಯನಿಷ್ಠ ಹಾಗೂ ಗ್ರಾಮೀಣ ಜನಪರ ಪತ್ರಿಕೋದ್ಯಮಕ್ಕೆ ಬದ್ಧವಾಗಿದೆ.